Thursday, 15 February 2018

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಫೆ. 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಫೆ. 17 ಮತ್ತು 18 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
    ಬಸವರಾಜ ರಾಯರಡ್ಡಿ ಅವರು ಫೆ. 17 ರಂದು ರಾತ್ರಿ 8 ಗಂಟೆಗೆ ಧಾರವಾಡದಿಂದ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.  ಫೆ. 18 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದಿಂದ ಯಲಬುರ್ಗಾಕ್ಕೆ ತೆರಳಿ, ಬೆಳಿಗ್ಗೆ 11 ಗಂಟೆಗೆ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 3 ಗಂಟೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವಕ ಮಂಡಳಿಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಂತ್ರಿಗಳು ಅದೇ ದಿನ ಸಂಜೆ 4-30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ. 
Post a Comment