Saturday, 3 February 2018

ಹೊಲಿಗೆ ತರಬೇತಿ ಹಾಗೂ ಲಘು ವಾಹನ ಚಾಲನೆ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಫೆ. 03 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರ ತರಬೇತಿ ಹಾಗೂ ಲಘುವಾಹನ ತರಬೇತಿಗೆ ಸೌಲಭ್ಯ ಪಡೆಯಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ಅರ್ಜಿ ಸಲ್ಲಿಸಲು ಫೆ. 09 ಕೊನೆಯ ದಿನಾಂಕವಾಗಿದೆ. ಆಸಕ್ತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಅರ್ಜಿದಾರರ ಫೋಟೋ, ದೃಢೀಕೃತ ಅಂಕಪಟ್ಟಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಕಾರಟಗಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
Post a Comment