Friday, 16 February 2018

ವಸತಿ ಶಾಲೆಗಳ ಪರೀಕ್ಷೆ ಮುಂದೂಡಿಕೆ


ಕೊಪ್ಪಳ ಫೆ. 16 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.
    ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಫೆ. 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ರವರೆಗೆ ಪ್ರವೇಶ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು.  ಆದರೆ, ಉಚ್ಚ ನ್ಯಾಯಾಲಯದ ರಿಟ್ ಪಿಟಿಷನ್ ಸಂ: ಡಬ್ಲ್ಯೂ.ಪಿ.ನಂ:6929/32/2018 (ಇಡಿಎನ್), ದಿ. 15-02-2018 ರನ್ವಯ ತಡೆಯಾಜ್ಞೆ ನೀಡಿರುವುದರಿಂದ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಯನ್ನು ಮುಂದೂಡಲಾಗಿದೆ.  ಪ್ರವೇಶ ಪರೀಕ್ಷೆ ನಡೆಸಲಾಗುವ ಮುಂದಿನ ದಿನಾಂಕವನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Post a Comment