Thursday, 8 February 2018

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಸಲ್ಲಿಸಲು ಕಾಲಾವಕಾಶ


ಕೊಪ್ಪಳ ಫೆ. 08 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಉತ್ತೀರ್ಣರಾದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರುಮಾಡಲು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.  
    ಸರ್ಕಾರದ ಆದೇಶದನ್ವಯ 2016-17ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ಅಂತಿಮವಾಗಿ ಫೆ. 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.  
ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್  www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ವೆಬ್‍ಸೈಟ್  www.tw.kar.nic.in ನಲ್ಲಿ ಫೆ. 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.  ಹಾಗೂ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಇವರಿಗೆ ಮುದ್ದಾಂ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Post a Comment