Thursday, 15 February 2018

ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆಗಳ ದೂರು ಸ್ವೀಕಾರ


ಕೊಪ್ಪಳ ಫೆ. 15 (ಕರ್ನಾಟಕ ವಾರ್ತೆ): ಕೊಪ್ಪಳ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧಿಕಾರಿಗಳು ಫೆ. 17 ರಂದು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಆಲಿಸುವರು.
    ಕೊಪ್ಪಳ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧಿಕಾರಿಗಳು ಫೆ. 17 ರಂದು ಬೆಳಿಗ್ಗೆ 11-30 ರಿಂದ ಮಧ್ಯಾಹ್ನ 1-30 ಗಂಟೆಯವರೆಗೆ ಕುಷ್ಟಗಿ ಹಾಗೂ ಗಂಗಾವತಿ ತಾಲೂಕು ಹಳೇ ಪ್ರವಾಸಿ ಮಂದಿರದಲ್ಲಿ ಮತ್ತು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಯಲಬುರ್ಗಾ ತಾಲೂಕಿನ ಹೊಸ ಸಕ್ರ್ಯೂಟ್ ಹೌಸ್‍ನಲ್ಲಿ ಹಾಗೂ ಕೊಪ್ಪಳದ ಲೋಕಾಯುಕ್ತ ಕಾರ್ಯಾಲಯದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕರಿಸಿ, ಅವರ ಅಹವಾಲುಗಳನ್ನು ಆಲಿಸುವರು.  ಸಾರ್ವಜನಿಕರು ದೂರು ಸಲ್ಲಿಸಲು ಬೇಕಾಗುವ ಪ್ರಪತ್ರ ಸಂ.1 ಮತ್ತು 2 ಲಭ್ಯವಿದ್ದು, ಸ್ಥಳದಲ್ಲಿಯೇ ಪಡೆಯಬಹುದು.  ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆದುಕೊಳ್ಳಬಹುದು.  ಹೆಚ್ಚಿನ ಮಾಹಿತಿಗೆ ಕರ್ನಾಟಕ ಲೋಕಾಯುಕ್ತ ಕೊಪ್ಪಳ ದೂರವಾಣಿ ಸಂಖ್ಯೆ 08539-220200, & 220533 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಪೊಲೀಸ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment