Monday, 23 April 2018

ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ


ಕೊಪ್ಪಳ ಏ. 23 (ಕರ್ನಾಟಕ ವಾರ್ತೆ) : ಕನ್ನಡ ಚಿತ್ರರಂಗದ ಮೇರು ನಟ, ಪದ್ಮಭೂಷಣ ಡಾ. ರಾಜ್‍ಕುಮಾರ್ ಅವರ 90 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಏ. 24 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದೆ.
  ವಿಧಾನಸಭಾ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ. ರಾಜ್‍ಕುಮಾರ್ ಅವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು.  ಡಾ. ರಾಜ್‍ಕುಮಾರ್ ಅವರು ನಟಿಸಿರುವ ಚಲನಚಿತ್ರಗೀತೆಗಳ  ಹಾಡುಗಳನ್ನು ಕಲಾವಿದರು ಪ್ರಸ್ತುತಪಡಿಸುವರು.  ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ತಿಳಿಸಿದ್ದಾರೆ.
Post a Comment