Friday, 4 May 2018

ಕೊಪ್ಪಳ : ಅಂಚೆ ಮತ ದಾಖಲಿಸಲು ಮೇ. 06 ವರೆಗೆ ಅವಕಾಶ


ಕೊಪ್ಪಳ ಮೇ. 04 (ಕರ್ನಾಟಕ ವಾರ್ತೆ): ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಹಾಗೂ ಚುನಾವಣಾ ಕರ್ತವ್ಯದ ಮೇಲೆ ಇರುವ ಸಿಬ್ಬಂದಿಗಳು ಅಂಚೆ ಪತ್ರದ ಮೂಲಕ ಮತವನ್ನು ಚಲಾಯಿಸಲು ಕೊಪ್ಪಳ ತಹಸಿಲ್ದಾರರ ಕಚೇರಿಯಲ್ಲಿ ಅಂಚೆ ಮತ ಪತ್ರ ಸೌಲಭ್ಯ ಕೇಂದ್ರ ಪ್ರಾರಂಭಿಸಲಾಗಿದೆ.
     ಚುನಾವಣಾ ಆಯೋಗದ ಸೂಚನೆಯಂತೆ ವಿಧಾನಸಭಾ ಚುನಾವಣೆ ನಿಮಿತ್ಯ ಚುನಾವಣೆ ಕರ್ತವ್ಯದ ಮೇಲೆ ಇರುವ ಸಿಬ್ಬಂದಿಯವರಿಂದ ಅಂಚೆ ಮತಪತ್ರದ ಮೂಲಕ ಮತವನ್ನು ದಾಖಲಿಸುವ ವ್ಯವಸ್ಥೆಯನ್ನು ಉತ್ತೇಜಿಸಲು ‘ಅಂಚೆ ಮತಪತ್ರ ಸೌಲಭ್ಯ ಕೇಂದ್ರ’ ವನ್ನು ಕೊಪ್ಪಳ ತಹಸಿಲ್ದಾರರ ಕಚೇರಿ ಸಭಾಂಗಣದಲ್ಲಿ ಪ್ರಾರಂಭಿಸಲಾಗಿದೆ.   ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ಹಾಗೂ ಚುನಾವಣಾ ಕರ್ತವ್ಯದ ಮೇಲೆ ಇರುವ ಸಿಬ್ಬಂದಿಗಳು ಮೇ. 04 ರಿಂದ 06 ರವರೆಗೆ ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಮತವನ್ನು ದಾಖಲಿಸಲು ಸಮಯ ನಿಗದಿಪಡಿಸಲಾಗಿದೆ.  ಸೇವಾ ಮತದಾರರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಕ್ಷೇತ್ರ ಚುನಾವಣಾಧಿಕಾರಿ ಸಿ.ಡಿ. ಗೀತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment