Wednesday, 9 May 2018

ಚುನಾವಣೆ : ಕಾರ್ಮಿಕರಿಗೆ ಮೇ. 12 ರಂದು ವೇತನ ಸಹಿತ ರಜೆ ಘೋಷಣೆ


ಕೊಪ್ಪಳ ಮೇ. 08 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಎಲ್ಲಾ ಕಾರ್ಮಿಕರಿಗೆ ಮೇ. 12 ರಂದು ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ ಎಂದು ಕೊಪ್ಪಳ ಕಾರ್ಮಿಕ ಇಲಾಖೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ. 
    ಭಾರತ ಚುನಾವಣಾ ಆಯೋಗವು, ಮೇ. 12 ರಂದು ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯಯಲ್ಲಿ ಮತದಾನಕ್ಕಾಗಿ ನಿಗದಿಪಡಿಸಿದೆ.  ಕೊಪ್ಪಳ ಜಿಲ್ಲೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆ/ ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ.  ಮೇ. 12 ರಂದು ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಎಲ್ಲಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತ ಚಲಾವಣೆಗಾಗಿ ವೇತನ ಸಹಿತ ರಜೆಯನ್ನು ನೀಡಬೇಕು ಎಂದು  ಸೂಚನೆ ನೀಡಲಾಗಿದೆ.  ತಪ್ಪಿದಲ್ಲಿ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಕಾರ್ಮಿಕ ಅಧಿಕಾರಿ ಶ್ಯಾಮರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment