Thursday, 10 May 2018

ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ


ಕೊಪ್ಪಳ ಮೇ. 10 (ಕರ್ನಾಟಕ ವಾರ್ತೆ): ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಗುರುವಾರದಂದು ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಭಕ್ತಿ ಪೂರ್ವಕ ನಮನ ಸಲ್ಲಿಸಲಾಯಿತು.  


    ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.  ಜಿಲ್ಲಾದಿಕಾರಿ ಎಂ. ಕನಗವಲ್ಲಿ ಸೇರಿದಂತೆ ಅನೇಕ ಗಣ್ಯರು ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಭಕ್ತಿ ಪೂರ್ವಕ ನಮನ ಸಲ್ಲಿಸಿದರು.  ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Post a Comment