Wednesday, 9 May 2018

ಮೊರಾಜಿ ದೇಸಾಯಿ ಪ.ಪೂ ಬಾಲಕಿಯರ ವಸತಿ ಕಾಲೇಜು : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಮೇ. 08 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜುಗಳ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಣೆಯಾಗುತ್ತಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಕೋರ್ಸುಗಳ ಅನುಗುಣವಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಕೊಪ್ಪಳದ ದದೆಗಲ್‍ನ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಬಾಲಕಿಯರ ವಸತಿ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ ಕೋರ್ಸುಗಳಿಗೆ ತಲಾ 40 ಆಸನಗಳಿವೆ.  ಹಿರೇಬೆಣಕಲ್ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಹಾಗೂ ಹೆಚ್.ಇ.ಬಿ.ಎ ಕೋರ್ಸುಗಳಿಗೆ ತಲಾ 60 ಆಸನಗಳಿವೆ.  ಕುಕನೂರಿನ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಹಾಗೂ ಹೆಚ್.ಇ.ಬಿ.ಎ ಕೋರ್ಸುಗಳಿಗೆ ತಲಾ 60 ಸ್ಥಾನಗಳು ಲಭ್ಯವಿವೆ. 
    ಅರ್ಜಿ ಸಲ್ಲಿಸಲು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.  ವಿದ್ಯಾರ್ಥಿಗಳ ಕುಟುಂಬದ ವಾರ್ಷಿ ವರಮಾನವು 1 ಲಕ್ಷ ರೂ. ಮೀರಿರಬಾರದು.  ಅಂಗವಿಕಲ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.  ಕಾಲೇಜಿನ ವಿಜ್ಞಾನ, ವಾಣಿಜ್ಯ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಶೇ.75 ಸ್ಥಾನಗಳನ್ನು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ ಶೇ.25 ಇತರೆ ವರ್ಗದವರಿಗೆ ವಿತರಿಸಲಾಗುವುದು.  ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯದ ದೃಢೀಕರಿಸಿದ ಪ್ರಮಾಣ ಪತ್ರ, ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿಯ ದೃಢೀಕೃತ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿಯ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಮೇ. 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. 
    ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ, ಗಂಗಾವತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಅಥವಾ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಬಾಲಕಿಯರ ವಸತಿ ಕಾಲೇಜು ದದೆಗಲ್ ಮೊ.ಸಂ-9986470630, ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜು ಹಿರೇಬೆಣಕಲ್ ಮೊ.ಸಂ-9740702035, ಹಾಗೂ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಬಾಲಕಿಯರ ವಸತಿ ಕಾಲೇಜು ಕುಕನೂರ ಮೊ.ಸಂ-9901643176 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment