Wednesday, 2 May 2018

ಸ್ವ-ಉದ್ಯೋಗ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಮೇ. 02 (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ಇವರ ವತಿಯಿಂದ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಕೈಗೊಳ್ಳಲು ವಿವಿಧ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    ತರಬೇತಿಯಲ್ಲಿ ವೆಲ್ಡಿಂಗ್ & ಫ್ಯಾಬ್ರಿಕೇಶನ್, ಪುರುಷರ ಟೇಲರಿಂಗ್ ಹಾಗೂ ಕೋಳಿ ಸಾಕಾಣಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಪ್ರಾಯೋಗಿಕ ಕೌಶಲ್ಯಗಳ ಜೊತೆಗೆ ವ್ಯವಹಾರಿಕ ತಂತ್ರಗಳ ಬಗ್ಗೆಯೂ ಸಹ ನುರಿತ ತರಬೇತುದಾರರಿಂದ ತರಬೇತಿ ನೀಡಲಾಗುವುದು.  ತರಬೇತಿ ಪಡೆಯಲಿಚ್ಚಿಸುವವರು ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.  ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ದಾಂಡೇಲಿ ರಸ್ತೆ, ಹಳಿಯಾಳ (ಉತ್ತರ ಕರ್ನಾಟಕ ಜಿಲ್ಲೆ), ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 08284-220807, 9483485489, 9482188780 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Post a Comment