Wednesday, 16 May 2018

ಕೊಪ್ಪಳ : ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಮೇ. 16 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಕೊಪ್ಪಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೇಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್  www.sw.kar.nic.in  ಅಥವಾ  http://admissions.kar.nic.in/hosteladmission ಪೋರ್ಟಲ್ ಮೂಲಕ ಜೂನ್. 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 9480843005 ಕ್ಕೆ ಅಥವಾ ಇಮೇಲ್  helpswkar@gmail.com ಮೂಲಕ ಹಾಗೂ ದೂರವಾಣಿ ಸಂಖ್ಯೆ 08539-220590 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment