Wednesday, 13 June 2018

ಐಟಿಐ ಪಾಸಾದವರಿಗೆ 2 ವರ್ಷದ ಡಿಪೆÇ್ಲೀಮಾ ಕೋರ್ಸ್ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಐಟಿಐ ಪಾಸಾದವರಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಎರಡು ವರ್ಷದ ಡಿಪೆÇ್ಲೀಮಾ ಕೋರ್ಸುಗಳಿಗೆ ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
      ಪ್ರಸಕ್ತ ಸಾಲಿನಲ್ಲಿ ಎರಡು ವರ್ಷಗಳ ಐಟಿಐ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಪ್ರವೇಶಕ್ಕಾಗಿ ಇಂಟರಾಕ್ಟಿವ್ ಕೌನ್ಸಲಿಂಗ್ ಮುಖಾಂತರ ಡಿಪ್ಲೋಮಾ ಪ್ರವೇಶಕ್ಕೆ ಆಸಕ್ತರು ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸಲು ಜೂ. 23 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆ ವೆಬ್‍ಸೈಟ್  www.dte.kar.nic.in ಮೂಲಕ ಪಡೆಯಬಹುದು.  ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ದಾಖಲಾತಿಗಳು ಮತ್ತು ಅವುಗಳ ದೃಢೀಕರಿಸಿದ ನಕಲು ಪ್ರತಿಗಳೊಂದಿಗೆ ಹಾಜರಾಗಿ  ಅರ್ಜಿ ನೋಂದಣಿ ಶುಲ್ಕವನ್ನು (ಜಿ.ಎಂ./ 2ಎ/ 2ಬಿ/ 3ಎ.3ಬಿ ರೂ. 100/- & ಎಸ್‍ಸಿ/ ಎಸ್‍ಟಿ/ ಸಿಎಟಿ-1 ರೂ. 50/-) ನಗದು ರೂಪದಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಕೊಪ್ಪಳ ಸಂಸ್ಥೆಯಲ್ಲಿ ಪಾವತಿಸಿ, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. 
       ಹೆಚ್ಚಿನ ಮಾಹಿತಿಗಾಗಿ ಪ್ರಿನ್ಸಿಪಾಲರ ಕಛೇರಿ, ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ದೂರವಾಣಿ ಸಂಖ್ಯೆ 9448715325 ಮತ್ತು 9481466097 ಕ್ಕೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment