Friday, 8 June 2018

4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಜೂ. 11 ರಂದು ಪೂರ್ವಭಾವಿ ಸಭೆ


ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ): ಕೊಪ್ಪಳದಲ್ಲಿ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆಯನ್ನು ಜೂ. 11 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. 
    4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಪೂರ್ವಭಾವಿ ಸಭೆಯು ಜೂ. 11 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.  ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ವಹಿಸುವರು.  ಸಭೆಗೆ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
Post a Comment