Monday, 11 June 2018

ಕನ್ನಡ ಪುಸ್ತಕ ಸೊಗಸು : ಬಹುಮಾನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜೂ. 11 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು/ ಲೇಖಕರು/ ಪ್ರಕಾಶಕರಿಗೆ "ಕನ್ನಡ ಪುಸ್ತಕ ಸೊಗಸು-2017" ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
    "ಕನ್ನಡ ಪುಸ್ತಕ ಸೊಗಸು-2017" ಈ ಪ್ರಶಸ್ತಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಮುಖಪುಟ ಚಿತ್ರ ಕಲೆಯ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರ ಕಲೆಯ  ದ್ವಿತೀಯ ಬಹುಮಾನಗಳನ್ನು ನೀಡಲಾಗುವುದು.  ಆಸಕ್ತ ಪ್ರಕಾಶಕರು/ ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.  ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ - ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಜೂ. 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ ಬೆಂಗಳೂರು-560002 ಈ ವಿಳಾಸಕ್ಕೆ  ಕಳುಹಿಸಿಕೊಡಬಹುದಾಗಿದೆ.  ಅರ್ಜಿ ಯೊಂದಿಗೆ ಸಲ್ಲಿಸಿದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.   
        ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಮೊದಲನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು-560002 ವೆಬ್‍ಸೈಟ್   www.kannadapustakapradhikara.com ದೂರವಾಣಿ ಸಂಖ್ಯೆ 080-22484516/ 22107704 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post a Comment