Wednesday, 13 June 2018

ಗಂಗಾವತಿಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ : ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜೂ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹೊಸದಾಗಿ ಪ್ರಾರಂಭವಾಗುತ್ತಿರುವ ಕೇಂದ್ರೀಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 
    ಕೇಂದ್ರೀಯ ವಿದ್ಯಾಲಯವನ್ನು ಗಂಗಾವತಿ ನಗರದ ಎಂ.ಎನ್.ಎಂ ಗಲ್ರ್ಸ್ ಪಿಯು ಕಾಲೇಜ್ ಕ್ಯಾಂಪಸ್‍ನಲ್ಲಿ ಹೊಸದಾಗಿ ಪ್ರಾರಂಭಿಸಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ವಿದ್ಯಾಲಯದಲ್ಲಿ 1 ರಿಂದ 5ನೇ ತರಗತಿಗೆ ಪ್ರವೇಶ ಪಡೆಯಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್  www.kvkoppal.org ಅನ್ನು ವೀಕ್ಷಿಸಬಹುದು.  ಅಥವಾ ದೂರವಾಣಿ ಸಂಖ್ಯೆ 08539-230006 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯರಾದ ಕೆ. ರಾಮಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment