Monday, 11 June 2018

ಯಲಬುರ್ಗಾ : ವಾರ್ಡ್‍ವಾರು ಕರಡು ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ


ಕೊಪ್ಪಳ ಜೂ. 11 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣ ಪಂಚಾಯತಿಯ ವಾರ್ಡ್‍ವಾರು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನಿಗದಿಪಡಿಸಿದ ವೇಳಾಪಟ್ಟಿಯಂತೆ ಯಲಬುರ್ಗಾ ಪಟ್ಟಣ ಪಂಚಾಯತಿಯ ಒಟ್ಟು 15 ವಾರ್ಡಗಳ ಮತದಾರರ ಪಟ್ಟಿಗಳಿಗೆ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಳನ್ನು ಅಳವಡಿಸಿಕೊಂಡು 15 ವಾರ್ಡಗಳ ಕರಡು ಮತದಾರರ ಪಟ್ಟಿ ತಯಾರಿಸಲಾಗಿದೆ.  ಕರಡು ಮತದಾರರ ಪಟ್ಟಿಯನ್ನು ಯಲಬುರ್ಗಾ ತಹಶೀಲ್ದಾರರ ನಿರ್ದೇಶನದಂತೆ ಆಯಾ ವಾರ್ಡಗಳಲ್ಲಿ ಪ್ರಚುರಪಡಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜೂ. 17 ರೊಳಗಾಗಿ ದಾಖಲೆಗಳ ಸಮೇತ ಲಿಖಿತವಾಗಿ ಯಲಬುರ್ಗಾ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ತೆರೆಯಲಾದ ಕೇಂದ್ರದಲ್ಲಿ ಸಲ್ಲಿಸಬಹುದು.  ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಯಲಬುರ್ಗಾ ಪ.ಪಂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
Post a Comment