Friday, 8 June 2018

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸದಸ್ಯರ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಜೂ. 08 (ಕರ್ನಾಟಕ ವಾರ್ತೆ):ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಜೂ. 12 ರಂದು ಕೊಪ್ಪಳ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಜಗದೀಶ ಹಿರೇಮನಿ ಅವರು ಜೂ. 11 ರಂದು ರಾತ್ರಿ 10 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.  ಜೂ. 12 ರಂದು ಬೆಳಿಗ್ಗೆ 10 ಗಂಟೆಗೆ ಪ.ಜಾತಿ/ಪ.ಪಂಗಡ ಹಾಗೂ ಸಫಾಯಿ ಕರ್ಮಚಾರಿಗಳ ಸಂಘದ ಮುಖಂಡರೊಂದಿಗೆ ಸಭೆ ನಡೆಸುವರು.  ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಫಾಯಿ ಕರ್ಮಚಾರಿಗಳ ಮುಖಂಡರೊಂದಿಗೆ ಸಭೆ ನಡೆಸುವರು.  ಮಧ್ಯಾಹ್ನ 03 ಗಂಟೆಗೆ ಕೊಪ್ಪಳ ನಗರಸಭೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಜಿಲ್ಲಾ ಸಫಾಯಿ ಕರ್ಮಚಾರಿಗಳ ಪ್ರತಿನಿಧಿಗಳು, ಪೌರಕಾರ್ಮಿಕರೊಂದಿಗೆ ಸಭೆ ಕೈಗೊಳ್ಳುವರು.  ಸಂಜೆ 5 ಗಂಟೆಗೆ ಸ್ಥಳೀಯ ಸಫಾಯಿ ಕರ್ಮಚಾರಿಗಳ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.  ಆಯೋಗದ ಸದಸ್ಯರು ಅದೇ ದಿನ ರಾತ್ರಿ 7 ಗಂಟೆಗೆ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಆಯೋಗದ ಸೆಕ್ಷನ್ ಆಫೀಸರ್ ಅವರು ತಿಳಿಸಿದ್ದಾರೆ.
Post a Comment