Monday, 30 July 2018

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ


ಕೊಪ್ಪಳ ಜು. 30 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ ಲೈನ್‍ನಲ್ಲಿ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. 
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ (ಹಾರ್ಡ ಕಾಪಿ) ಮೂಲ ಪ್ರತಿಯನ್ನು ಶಾಲೆಯಿಂದ ಧೃಢೀಕರಿಸಿ, ತಮ್ಮ ಶಾಲೆಯ ಮುಖ್ಯೋಪಾದ್ಯಾಯರಿಗೆ ಮೂಲ ಅರ್ಜಿಯನ್ನು ಸಲ್ಲಿಸಬೇಕು.  ಮುಖ್ಯೋಪಾದ್ಯಾಯರು ಈ ಅರ್ಜಿಗಳನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಪ್ಪಳ ಇವರಿಗೆ ಸಲ್ಲಿಸಬೇಕು.   ಅರ್ಜಿ ಸಲ್ಲಿಸಲು ಸೆ. 30 ಕೊನೆಯ ದಿನವಾಗಿರುತ್ತದೆ.  ವಿದ್ಯಾರ್ಥಿಗಳು ವೈಬ್‍ಸೈಟ್  www.scholarships.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೈಬ್‍ಸೈಟ್ www.gokdom.kar.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
Post a Comment