Tuesday, 24 July 2018

ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಜು. 24 (ಕರ್ನಾಟಕ ವಾರ್ತೆ): ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ ಪ್ರೌಢಶಾಲೆ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿಧ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸಲು ಅರ್ಜಿದಾರರು ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾದ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ಓದುತ್ತಿರಬೇಕು.  ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2017ರ ಜನವರಿ. 01 ರಿಂದ ಡಿಸೆಂಬರ್. 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು.  ಯುವಸಬಲಿಕರಣ ಮತ್ತು ಕ್ರೀಡಾ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಾಗೂ ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಗ್ರಾಮೀಣ/ ಮಹಿಳಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಜನೆಯಡಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಲ್ಲಿ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿದಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.  ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. 
ಕ್ರೀಡಾ ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ.10,000/- ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.  ಪ್ರಸ್ತುತ ಮಾದ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.  ಅರ್ಜಿ ಸಲ್ಲಿಸಲು ಆಗಸ್ಟ್. 25 ಕೊನೆಯ ದಿನವಾಗಿದ್ದು, ಸಹಾಯಕ ನಿರ್ದೇಶಕರು, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.  ತಡವಾಗಿ ಬಂದ ಅರ್ಜಿಗಳನ್ನು  ಗಣನೆಗೆ ತೆಗೆದುಕೊಳ್ಳುವುದಿಲ್ಲ.  ಆಯಾ ಶಾಲೆಯ ಮುಖ್ಯೋಪಾಧ್ಯಾಯರ ಮುಖಾಂತರ ಮುಂಗಡ ರಶೀದಿಯನ್ನು ತಪ್ಪದೇ ಪಡೆದು ಕಳುಹಿಸಬೇಕು.  ವಿದ್ಯಾರ್ಥಿಯ ಹೆಸರಿನಲ್ಲಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನು ಕಡ್ಡಾಯವಾಗಿ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಅಥವಾ ಹೆಸರು ಬರೆದ ರದ್ದುಪಡಿಸಿದ ಚೆಕ್ಕ್‍ನ್ನು ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 08539-201400 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment