Wednesday, 4 July 2018

ಬ್ಯೂಟಿ ಪಾರ್ಲರ್ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಜು. 04 (ಕರ್ನಾಟಕ ವಾರ್ತೆ): ಕೊಪ್ಪಳ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಆಸಕ್ತರಿಗೆ 30 ದಿನಗಳ ಉಚಿತ "ಬ್ಯೂಟಿಪಾರ್ಲರ್" ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು.  ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು.  ಕೊಪ್ಪಳ ಜಿಲ್ಲೆಯವರಾಗಿರಬೇಕು.  ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.  ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.  ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೊನೆಯ ಜು. 13 ಆಗಿದ್ದು, ಜು. 14 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು.  ಜು. 16 ರಿಂದ ತರಬೇತಿ ಪ್ರಾರಂಭಗೊಳ್ಳಲಿದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು.
      ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂರವಾಣಿ ಸಂಖ್ಯೆ 08539-231038, ಇಲ್ಲಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ಆರ್ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment