Monday, 6 August 2018

ಆ. 07 ರಂದು ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ


ಕೊಪ್ಪಳ ಆ. 06 (ಕರ್ನಾಟಕ ವಾರ್ತೆ): ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತಂತೆ ವಿಶೇಷ ಕಾರ್ಯಗಾರವನ್ನು ಆ. 07 ರಂದು ಸಂಜೆ 04 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದೆ.
     ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80ಸಿ ಅಡಿ ಭಾರತೀಯ ಸ್ಟೇಟ್ ಬ್ಯಾಂಕ್ ಮೂಲಕ ಲಭ್ಯವಿರುವ ಹೂಡಿಕೆ ಮತ್ತು ಉಳಿತಾಯ ಯೋಜನೆಗಳ ಕುರಿತಂತೆ ಕಾರ್ಯಗಾರದಲ್ಲಿ ವಿಶೇಷ ಮಾಹಿತಿ ನೀಡಲಾಗುವುದು.  ಎಲ್ಲ ಅಧಿಕಾರಿ, ಸಿಬ್ಬಂದಿಗಳು ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಎಸ್‍ಬಿಐ ಖಜಾನೆ ಶಾಖೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Post a Comment