Friday, 3 August 2018

ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಆ. 03 (ಕರ್ನಾಟಕ ವಾರ್ತೆ): ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ನಿರ್ದೇಶಕರು, ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆ. 10 ರ ಸಂಜೆ 5-30 ಗಂಟೆಯ ವರೆಗೆ ಅವಕಾಶ ಕಲ್ಪಿಸಿದೆ.  ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆ ವೆಬ್‍ಸೈಟ್  www.dte.kar.nic.in  ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ದಾಖಲಾತಿಗಳು ಮತ್ತು ಅವುಗಳ ದೃಢೀಕರಿಸಿದ ನಕಲು ಪ್ರತಿಗಳೊಂದಿಗೆ ಹಾಜರಾಗಿ ಅರ್ಜಿ ನೋಂದಣಿ ಶುಲ್ಕವನ್ನು (ಜಿ.ಎಂ./ 2ಎ/ 2ಬಿ/ 3ಎ.3ಬಿ ರೂ. 100/- & ಎಸ್‍ಸಿ/ ಎಸ್‍ಟಿ/ ಸಿಎಟಿ-1 ರೂ. 50/-) ನಗದು ರೂಪದಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಕೊಪ್ಪಳ ಸಂಸ್ಥೆಯಲ್ಲಿ ಪಾವತಿಸಿ, ಆಫ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. 
       ಹೆಚ್ಚಿನ ಮಾಹಿತಿಗಾಗಿ ಪ್ರಿನ್ಸಿಪಾಲರ ಕಛೇರಿ, ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್ ದೂರವಾಣಿ ಸಂಖ್ಯೆ 9448715325 ಮತ್ತು 9481466097 ಕ್ಕೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment