*************************
ಕೊಪ್ಪಳ, ಜ.12 (ಕರ್ನಾಟಕ ವಾರ್ತೆ): ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರವನ್ನು ಜಿಲ್ಲೆಯ ಗಂಗಾವತಿ ಮತ್ತು ಕಾರಟಗಿ ಎಪಿಎಂಸಿ ಪ್ರಾಂಗಣದಲ್ಲಿ ಜ. 13 ರಿಂದ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ (ಮಾಲ್ದಂಡಿ) ಹಾಗೂ ತೊಗರಿಯನ್ನು ಖರೀದಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಲಾದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿಸಲು ಜ. 13 ರಿಂದ ಗಂಗಾವತಿ ಮತ್ತು ಕಾರಟಗಿ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸರ್ಕಾರ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ ರೂ. 1470 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ. 1510 ರಂತೆ ಬೆಂಬಲ ಬೆಲೆ ಘೋಷಿಸಿದೆ. ಇದರ ಜೊತೆಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ಕ್ವಿಂ. ಭತ್ತಕ್ಕೆ 100 ರೂ. ಪ್ರೋತ್ಸಾಹಧನವನ್ನು ನೀಡಿ ಖರೀದಿಸಲು ಆದೇಶ ಹೊರಡಿಸಿದೆ. ಇದರಿಂದಾಗಿ ಪ್ರತಿ ಕ್ವಿಂಟಾಲ್‍ಗೆ ಸಾಮಾನ್ಯ ಭತ್ತದ ಬೆಂಬಲ ಬೆಲೆ ರೂ. 1570 ಹಾಗೂ ಗ್ರೇಡ್-ಎ ಭತ್ತದ ಬೆಂಬಲ ಬೆಲೆ ರೂ. 1610 ರಂತೆ ಖರೀದಿಸಲಾಗುವುದು. ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರದ ಎಪ್‍ಎಕ್ಯೂ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಭತ್ತ ಖರೀದಿಸಬೇಕು. ಕೊಪ್ಪಳ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇವರನ್ನು ಖರೀದಿ ಏಜೆನ್ಸಿಯಾಗಿ ನಿಗದಿಪಡಿಸಲಾಗಿದೆ. ಕೃಷಿ ಮಾರಾಟ ಇಲಾಖೆಯವರು ಗಂಗಾವತಿ ಮತ್ತು ಕಾರಟಗಿಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಎಲ್ಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಎಪಿಎಂಸಿಯಲ್ಲಿ ತೊಗರಿ ಖರೀದಿ :
**************ಪ್ರಸಕ್ತ ಮುಂಗಾರು ಹಂಗಾಮಿನ ಎಫ್‍ಎಕ್ಯೂ ಗುಣಮಟ್ಟದ ತೊಗರಿಯನ್ನು ಪ್ರತಿ ಕ್ವಿಂ. ಗೆ ರೂ. 5050 ರಂತೆ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂ. ತೊಗರಿಗೆ 450 ರೂ. ಪ್ರೋತ್ಸಾಹಧನ ನೀಡಲಿದೆ. ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಪ್ರತಿ ಕ್ವಿಂ. ಗೆ ರೂ. 5500 ರಂತೆ ಖರೀದಿಸಲಾಗುವುದು. ಭಾರತೀಯ ಆಹಾರ ನಿಗಮವು ಖರೀದಿ ಏಜೆನ್ಸಿಯಾಗಿದೆ. ಕೊಪ್ಪಳದ ಭಾರತೀಯ ಆಹಾರ ನಿಗಮವು ಈಗಾಗಲೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆದರೆ ಖರೀದಿ ಕೇಂದ್ರಕ್ಕೆ ತರಲಾಗುತ್ತಿರುವ ತೊಗರಿಯಲ್ಲಿ ಶೇ. 80 ರಿಂದ 90 ರಷ್ಟು ತೊಗರಿಯು ಎಫ್‍ಎಕ್ಯೂ ಗುಣಮಟ್ಟದ್ದಾಗಿಲ್ಲ ಎಂದು ಭಾರತೀಯ ಆಹಾರ ನಿಗಮದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಇದರಿಂದಾಗಿ ಖರೀದಿ ಕೇಂದ್ರದಲ್ಲಿ ಗದ್ದಲ ಉಂಟಾಗುತ್ತಿರುವುದರಿಂದ, ಖರೀದಿ ಪ್ರಕ್ರಿಯೆಗೆ ತೊಂದರೆಯಾಗುತ್ತಿದೆ ಎಂದು ನಿಗಮದ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವ ಕೇಂದ್ರವನ್ನು ಕೊಪ್ಪಳದ ಎಪಿಎಂಸಿ ಪ್ರಾಂಗಣದಲ್ಲಿ ಪ್ರಾರಂಭಿಸಬೇಕು. ನಿಯಮಾನುಸಾರ ಎಫ್‍ಎಕ್ಯೂ ಗುಣಮಟ್ಟದ ತೊಗರಿಯನ್ನು ಖರೀದಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಕೊಡಬಾರದು. ಖರೀದಿ ಕೇಂದ್ರದಲ್ಲಿ ಕೊಪ್ಪಳ ಎಪಿಎಂಸಿಯ ಇಬ್ಬರು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಖರೀದಿ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ, ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಳಿಜೋಳ ಖರೀದಿಗೆ ಸಂಬಂಧಿಸಿದಮತೆ ಸರ್ಕಾರದಿಂದ ಆದೇಶ ಬಂದ ನಂತರ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿಗಳು ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪಕೃಷಿ ನಿರ್ದೇಶಕ ವೀರೇಶ್ ಹುನಗುಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಡಿ. ಗೀತಾ, ಸೇರಿದಂತೆ ಭಾರತೀಯ ಆಹಾರ ನಿಗಮ, ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

No comments:
Post a Comment