***************************
ಕೊಪ್ಪಳ, ಜ.13 (ಕರ್ನಾಟಕ ವಾರ್ತೆ): ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಕೊಪ್ಪಳ ಇವರು ಜ.16 ರಂದು ಗಂಗಾವತಿ ನಗರದ ಹಳೆಯ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕರಿಸಿ, ಅಹವಾಲು ಆಲಿಸಲಿದ್ದಾರೆ.
ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಬಹುದು ಹಾಗೂ ಸರ್ಕಾರಿ ಸೌಕರರು ಲಂಚದ ಹಣಕ್ಕೆ ಬೇಡಿಕೆ ಹಾಗೂ ಅಕ್ರಮ ಸಂಪತ್ತು ಹೊಂದಿದ್ದಲ್ಲಿ ದೂರು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಪಿಡಬ್ಲೂಡಿ ಕ್ವಾಟ್ರಸ್ ನಂ-5, ಈಶ್ವರ ಗುಡಿ ಹಿಂದುಗಡೆ, ಕೊಪ್ಪಳ ದೂ.ಸಂ: 08539-221833, ಮೊ-9480806319, 9480806320 ಅಥವಾ ಇ-ಮೇಲ್ ವಿಳಾಸ dspkpl.acb@karnataka.gov.in ಇಲ್ಲಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಎಸಿಬಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
No comments:
Post a Comment