Friday, 30 August 2019

2017; ಜ.21 ರಂದು ಕೊಪ್ಪಳದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ


*****************
ಕೊಪ್ಪಳ, ಜ.19 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಜ.21 ರಂದು ಬೆಳಿಗ್ಗೆ 11.30 ಗಂಟೆಗೆ ಕೊಪ್ಪಳ ನಗರಸಭೆ ಎದುರುಗಡೆ ಇರುವ ಶಾದಿಮಹಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತಿ ಅಧ್ಯಕ್ಷ ನಾಗರಳ್ಳಿ ಶೇಖರಪ್ಪ ಬಸವರಡ್ಡೆಪ್ಪ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗದುಗಿನ ಅನಂತ ವಿದ್ಯಾ ಸಂಸ್ಥೆ ಅಧ್ಯಕ್ಷರು ಹಾಗೂ ಪ್ರಾದ್ಯಾಪಕರಾದ ಪ್ರೊ. ಎಚ್.ಎಸ್. ದಳವಾಯಿ ಅವರು ನಿಜಶರಣ ಅಂಬಿಗರ ಚೌಡಯ್ಯ ಕುರಿತ ವಿಶೇಷ ಉಪನ್ಯಾನ ನೀಡುವರು. ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಸಿರಸಪ್ಪಯ್ಯನ ಮಠದಿಂದ ಅಂಬಿಗರ ಚೌಡಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ದೊರೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments: