Friday, 30 August 2019
2017; ಡೆಹಾರಡೂನ್ ಮಿಲಿಟರಿ ಶಾಲೆ 8ನೇ ತರಗತಿ ಪ್ರವೇಶ ಪರೀಕ್ಷೆ : ಅರ್ಜಿ ಆಹ್ವಾನ
****************************
ಕೊಪ್ಪಳ, ಫೆ.22(ಕರ್ನಾಟಕ ವಾರ್ತೆ): ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ಇವರ ವತಿಯಿಂದ, ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಡೆಹಾರಡೂನ್ ಕಾಲೇಜ್ 8ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕದ ಬಾಲಕರಿಗೆ ಜೂನ್ ತಿಂಗಳಲ್ಲಿ ನಡೆಯಲಿರುವ ಪ್ರವೇಶ ಪರಿಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಜನೇವರಿ-2018ನೇ ಅವಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹಾರಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಜೂನ್.01 ಮತ್ತು 02 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿವೆ. ಪರೀಕೆಗಾಗಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು 01-01-2018 ರಂತೆ 11.5 ರಿಂದ 13 ವರ್ಷದೊಳಗಿರಬೇಕು (ಅಂದರೆ ದಿನಾಂಕ 02-06-2005 ರಿಂದ 01-07-2006 ರೊಳಗೆ ಜನಿಸಿರಬೇಕು). ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಸರ್ವರೀತಿಯ ವಿದ್ಯಾಭ್ಯಾಸ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ ಶುಲ್ಕ ರೂ. 42,400 ಆಗಿರುತ್ತದೆ.
ವಿವರಣೆ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಮೇರೆಗೆ ನಿರ್ದೇಶಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು 560 025, ಇಲ್ಲಿಂದ ದಿ ಕಮಾಂಡೆಂಟ್, ಆರ್‍ಐಎಂಸಿ ಡೆಹ್ರಾಡೂನ್ (ಪೇಯಬಲ್ ಅಟ್ ಎಸ್‍ಬಿಐ ಟೆಲ್ ಭವನ್, ಡೆಹ್ರಾಡೂನ್- ಬ್ಯಾಂಕ್ ಕೋಡ್- 01576), ಇವರ ಹೆಸರಿನಲ್ಲಿ ಪಡೆದ ರೂ. 550 (ಸಾಮಾನ್ಯ ಅಭ್ಯರ್ಥಿಗಳಿಗೆ) & ರೂ.505 (ಎಸ್/ಎಸ್‍ಟಿ ಅಭ್ಯರ್ಥಿಗಳಿಗೆ) ಡಿಮಾಂಡ್ ಡ್ರಾಪ್ಟ್ ಮೂಲಕ ಖುದ್ದಾಗಿ ಪಡೆಯಬಹುದಾಗಿದೆ. ರಿಜಿಸ್ಟರ್ಡ್ ಪಾರ್ಸಲ್ ಮೂಲಕ ಅರ್ಜಿ ನಮೂನೆಗಳನ್ನು ಪಡೆಯಲಿಚ್ಚಿಸುವ ಅಭ್ಯಾರ್ಥಿಗಳು ಮೇಲೆ ತಿಳಿಸಿದ ಬ್ಯಾಂಕ್ ಡ್ರಾಪ್ಟ್‍ನೊಂದಿಗೆ 11”/9” ಅಳತೆಯ ಸೈಜಿನ ಸ್ವವಿಳಾಸದ ಲಕೋಟೆಯ ಮೇಲೆ ರೂ.10 ಮೌಲ್ಯದ ಅಂಚೆ ಚೀಟಿ ಲಗತ್ತಿಸಿ ಕಳುಹಿಸಬೇಕು.
ಲಕೋಟೆಯ ಮೇಲೆ ಅಭ್ಯರ್ಥಿಯ ಪೂರ್ಣ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಆಂಗ್ಲ ಭಾಷೆಯ ಜನನ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಸೈಜಿನ ಭಾವಚಿತ್ರ, ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ಧೃಢಿಕರಣ ಪ್ರತಿ (ಆಂಗ್ಲ ಭಾಷೆಯ), ಪರೀಕ್ಷಾ ಪ್ರವೇಶ ಪತ್ರವನ್ನು ರವಾನಿಸಲು ರೂ.40 ರ ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ, ಶಾಲಾ ಮುಖ್ಯೋಪಾಧ್ಯಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರ ಮೂಲ ಪ್ರತಿ ಹಾಗೂ ರಾಜ್ಯದ ವಾಸಸ್ಥಾನ ಧೃಢಿಕರಣ ಪತ್ರ (ತಹಶಿಲ್ದಾರರಿಂದ) ಲಗತ್ತಿಸಿ ಮಾರ್ಚ್ 31 ರ ಒಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Subscribe to:
Post Comments (Atom)
No comments:
Post a Comment