ಅ.೦೨ ರಂದು ಕೊಪ್ಪಳದಲ್ಲಿ ಗಾಂಧಿ ಜಯಂತಿ ಆಚರಣೆ
ಕೊಪ್ಪಳ ಅ. ೦೧ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆ ಅಂಗವಾಗಿ ಗಾಂಧೀಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೊÃಬರ್. ೦೨ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಏರ್ಪಡಿಸಲಾಗಿದೆ.ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಭುರಾಜ ನಾಯಕ್ ಅವರು ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ ನೀಡುವರು. ಗಾಂಧೀಜಿಯವರ ಕುರಿತ ಸಾಕ್ಷö್ಯಚಿತ್ರ ಪ್ರದರ್ಶನ ಮತ್ತು ಸರ್ವಧರ್ಮ ಪ್ರಾರ್ಥನೆ, ಭಜನೆ ಕಾರ್ಯಕ್ರಮ ನಡೆಯಲಿದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment