ಗಂಗಾವತಿ; ಸೆ.೧೧ ರಂದು “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಕಾರ್ಯಕ್ರಮ ನೇರ ಪ್ರಸಾರ
ಕೊಪ್ಪಳ ಸೆ. ೦೯ (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ವತಿಯಿಂದ ಕೇಂದ್ರ ವಲಯದ ಕಾರ್ಯಕ್ರಮಗಳಾದ “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಮತ್ತು ರಾಷ್ಟಿçÃಯ ಕೃತಕ ಗರ್ಭದಾರಣ ಕಾರ್ಯಕ್ರಮದ ನೇರ ಪ್ರಸಾರವನ್ನು ಸೆಪ್ಟೆಂಬರ್. ೧೧ ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಭಾರತ ಸರ್ಕಾರದ ವತಿಯಿಂದ ಕೇಂದ್ರ ವಲಯದ ಕಾರ್ಯಕ್ರಮಗಳಾದ “ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ” ಮತ್ತು ರಾಷ್ಟಿçÃಯ ಕೃತಕ ಗರ್ಭದಾರಣ ಕಾರ್ಯಕ್ರಮವನ್ನು ಸೆಪ್ಟೆಂಬರ್. ೧೧ ರಂದು ದೇಶಾದ್ಯಂತ ಪ್ರಾರಂಭಿಸಲು ನಿರ್ಣಯಿಸಲಾಗಿದೆ. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶ ರಾಜ್ಯದ ಮಥುರಾದಲ್ಲಿ ಪ್ರಧಾನ ಮಂತ್ರಿಗಳು, ಭಾರತ ಸರ್ಕಾರ ಉದ್ಘಾಟನೆ ಮಾಡಿ, ರೈತರನ್ನು ಉದ್ದೆÃಶಿಸಿ ಮಾತನಾಡಲಿದ್ದಾರೆ, ದೇಶದ ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಕಾರ್ಯಕ್ರಮದ ನೇರಪ್ರಸಾರ ವ್ಯವಸ್ಥೆ ಮಾಡಲಾಗುತ್ತಿದ್ದು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ತಜ್ಞರಿಂದ ಜಾನುವಾರು ರೋಗಗಳ ನಿಯಂತ್ರಣ ಹಾಗೂ ಕೃತಕ ಗರ್ಭದಾರಣೆ ಕುರಿತು ರೈತರುಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಕಾರ್ಯಕ್ರಮದಲ್ಲಿ ಸಂಸತ ಸದಸ್ಯರು, ಕೊಪ್ಪಳ ಜಿಲ್ಲೆಯ ಎಲ್ಲಾ ಶಾಸಕರುಗಳು, ಅದ್ಯಕ್ಷರು, ಜಿಲ್ಲಾ ಪಂಚಾಯತ್, ಕೊಪ್ಪಳ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಎಲ್ಲಾ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಆಸಕ್ತ ರೈತರುಗಳು ಈ ಕಾರ್ಯಕ್ರಮಕ್ಕೆ ಹಾಜರಾಗಿ ಪ್ರಯೋಜನ ಪಡೆದುಕೊಳ್ಳುವಂತೆ ಕೊಪ್ಪಳ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೆÃಶಕರು ಡಾ.ಬಸಯ್ಯ ಸಾಲಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment