ಕೊಪ್ಪಳ, ಜೂ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿ ಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ಜೂ. 28 ರಂದು ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ವಿಶ್ವನಾಥರೆಡ್ಡಿ ಅವರು ವಹಿಸುವರು. ಮೇ ಅಂತ್ಯಕ್ಕೆ ಸಾಧಿಸಿದ ಪ್ರಗತಿಯ ಮಾಹಿತಿಯೊಂದಿಗೆ ಸಂಬAಧಪಟ್ಟ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment